ಗಣಪತಿ ಆತ್ಮಹತ್ಯೆ ಪ್ರಕರಣ: ಸರ್ಕಾರಕ್ಕೆ ವರದಿ ಸಲ್ಲಿಸಿದ ಆಯೋಗ

ಬೆಂಗಳೂರು: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ಮುಂದುವರಿಸಿರುವ ಬೆನ್ನಲ್ಲೇ, ಈ ಹಿಂದೆ ರಾಜ್ಯ ಸರ್ಕಾರ ನೇಮಿಸಿದ್ದ ನಿವೃತ್ತ ನ್ಯಾಯಾಧೀಶ ನ್ಯಾ. ಕೆ. ಎನ್. ಕೇಶವನಾರಾಯಣ ಆಯೋಗ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.

ಆಯೋಗವು ಒಟ್ಟು 320 ಪುಟಗಳ ವರದಿ ಸಲ್ಲಿಸಿದ್ದು, ಗಣಪತಿ ಒತ್ತಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಲಭಿಸಿಲ್ಲ.ಸೋಮವಾರ ವಿಕಾಸಸೌಧದಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಆಯೋಗ ವರದಿ ಸಲ್ಲಿಸಿದೆ. ಆದರೆ ಆರೋಪ ಎದುರಿಸಿದ್ದ ಅಂದಿನ ಗೃಹ ಸಚಿವ ಕೆ.ಜೆ. ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಎ.ಎಂ. ಪ್ರಸಾದ್ ಹಾಗೂ ಪ್ರಣಬ್ ಮೊಹಾಂತಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿಲ್ಲ ಎಂದು ತಿಳಿದುಬಂದಿದೆ.

Post a Comment

Distributed by Presul Info Tech

Distributed by Gooyaabi Templates | Designed by Presul Info Tech