![]() |
ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ದಿನಾಂಕ ಹತ್ತಿರವಾಗುತ್ತಿದ್ದು, ಗುಜರಾತ್‌ನಿಂದ ಅದಾಗಲೇ ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ ಮಷಿನ್) ಆಗಮಿಸಿದೆ. |
ಉತ್ತರ ಪ್ರದೇಶ ಹಾಗೂ ಗುಜರಾತ್ ಚುನಾವಣೆಯಲ್ಲಿ ಬಳಸಿದ್ದ ಇವಿಎಂ ಯಂತ್ರಗಳನ್ನು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸಹ ಬಳಸಲಾಗುತ್ತದೆ. ಸದ್ಯ ನಗರಕ್ಕೆ ಆಗಮಿಸಿರುವ ಮತಯಂತ್ರವನ್ನು ಸ್ಟ್ರಾಂಗ್ ರೂಂನಲ್ಲಿ ಭದ್ರವಾಗಿ ಇರಿಸಲಾಗಿದೆ. ವಿಶೇಷ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.
ಇನ್ನೂ ಕೆಲವೇ ದಿನಗಳಲ್ಲಿ ಅಭ್ಯರ್ಥಿಗಳು, ಮತದಾರರ ಹೆಸರನ್ನು ಭೂತ್ ಪ್ರಕಾರ ವರ್ಗೀಕರಿಸಲಾಗುತ್ತದೆ. ಚುನಾವಣೆ ಪೂರ್ವ ಹಾಗೂ ನಂತರದ ಕ್ರಮಗಳನ್ನು ಕೈಗೊಳ್ಳುವ ಕಾರ್ಯ ಆಗಲಿದೆ. ಈ ಮೂಲಕ ರಾಜ್ಯದಲ್ಲಿ ಚುನಾವಣೆಗೆ ಅಗತ್ಯವಿರುವ ಎಲ್ಲಾ ಸಿದ್ಧತೆಯನ್ನು ಕೇಂದ್ರ ಚುನಾವಣಾ ಆಯೋಗ ಮಾಡಿಕೊಳ್ಳುತ್ತಿದೆ.
ಕರ್ನಾಟಕದಲ್ಲಿ ಇವಿಎಂ ಯಂತ್ರ ಬಳಕೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದ್ದು, ಗೃಹ ಸಚಿವ ರಾಮಲಿಂಗರೆಡ್ಡಿ ನಿನ್ನೆ ಇವಿಎಂ ಯಂತ್ರಗಳ ಬಗ್ಗೆ ನಮಗೆ ಅನುಮಾನ ಇದೆ. ಅದನ್ನು ಬಗೆಹರಿಸಿ ಎಂದು ಕೋರಿದ್ದರು.





Post a Comment